

ಕೋಲಾರ: 2025–26ನೇ ಶೈಕ್ಷಣಿಕ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಿಸಿದೆ.
ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. National Council for Teacher Education (NCTE) ಮಾನ್ಯತೆ ಪಡೆದ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ.25,000ರ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತದೆ.
ಅರ್ಜಿಗೆ ಅಗತ್ಯ ಷರತ್ತುಗಳು ವಿದ್ಯಾರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು,
ಬಿ.ಎಡ್ ಕೋರ್ಸು ಪೂರ್ಣಾವಧಿಯದ್ದಾಗಿರಬೇಕು , ಕುಟುಂಬದ ವಾರ್ಷಿಕ ಆದಾಯ ರೂ.6 ಲಕ್ಷ ಮೀರಿರಬಾರದು , ಅನುದಾನ ಲಭ್ಯತೆ ಅನುಸಾರ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ , ಪ್ರತೀ ಶೈಕ್ಷಣಿಕ ವರ್ಷದಲ್ಲಿ ಹೊಸ (Fresh) ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯ
ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಡಿಸೆಂಬರ್ 31. ವಿದ್ಯಾರ್ಥಿಗಳು
ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://gokdom.kar.nic.in ಭೇಟಿ ನೀಡಬಹುದು. ಜೊತೆಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿ ದೂರವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ ಕೋಲಾರ ಜಿಲ್ಲಾ ಕಚೇರಿ: 08152-295257 , ಬಂಗಾರಪೇಟೆ ಮಾಹಿತಿ ಕೇಂದ್ರ 99649 44123 ,
ಮಾಲೂರು ಮಾಹಿತಿ ಕೇಂದ್ರ 98444 4520 , ಶ್ರೀನಿವಾಸಪುರ ಮಾಹಿತಿ ಕೇಂದ್ರ 95354 66160, ಮುಳಬಾಗಿಲು ಮಾಹಿತಿ ಕೇಂದ್ರ 78992 66051
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಇದನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

