

ಶ್ರೀನಿವಾಸಪುರ ಹೊರವಲಯದ ಎಎಸ್ಆರ್ ಪ್ಯಾಲೇಸ್ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ 13ನೇ ಶೈಕ್ಷಣಿಕ ಕಾರ್ಯಾಗಾರವನ್ನು ಲೋಕಸಭಾ ಸದಸ್ಯ ಮಲ್ಲೇಶ್ ಬಾಬು ಉದ್ಘಾಟಿಸಿದರು.
ಶ್ರೀನಿವಾಸಪುರ: ದೈಹಿಕ ಶಿಕ್ಷಕರು ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಪ್ರೋತ್ಸಾಹಿಸಬೇಕು. ಅವರಿಗೆ ಪೂರಕವಾದ ತರಬೇತಿ ನೀಡಬೇಕು ಎಂದು ಲೋಕಸಭಾ ಸದಸ್ಯ ಮಲ್ಲೇಶ್ ಬಾಬು ಹೇಳಿದರು.
ಪಟ್ಟಣದ ಹೊರವಲಯದ ಎಎಸ್ಆರ್ ಪ್ಯಾಲೇಸ್ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ 13ನೇ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಶಿಕ್ಷಕರಿಗೆ ಸರ್ಕಾರ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನೆ ಸೆಳೆಯಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ತಿನ ಮಾಜಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ ಪ್ರತಿ ಶಾಲೆಗೂ ದೈಹಿಕ ಶಿಕ್ಷಕರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದಾಗಿ ಕ್ರೀಡಾ ಚಟುವಟಿಕೆ ಸ್ಥಗಿತಗೊಂಡಿದೆ ಎಂದು ಹೇಳಿದರು.
ಸಮಗ್ರ ಶಿಕ್ಷಣ ಯೋಜನೆಯಲ್ಲಿ ದೈಹಿಕ ಶಿಕ್ಷಣಕ್ಕೆ ಆದ್ಯತೆ ದೊರೆಯಬೇಕು. ದೈಹಿಕ ಶಿಕ್ಷಣ ಶಿಕ್ಷಕರ ಕ್ಷೇಮ ಪಾಲನೆಗೂ ಆದ್ಯತೆ ನೀಡಬೇಕು. ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆ ಈಡೆರಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ದೈಹಿಕ ಶಿಕ್ಷಕರು ವದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸಬೇಕು. ದೈಹಿಕ ಶಿಕ್ಷಕರು ಪರಿಶ್ರಮ ಹಾಕಿ ಮಕ್ಕಳನ್ನು ಕ್ರೀಡಾ ಕ್ಷೇತ್ರದಲ್ಲಿ ಮುಂದೆ ತರಬೇಕು. ದೇಶದ ಹಾಗು ಹೋಗುಗಳ ಬಗ್ಗೆ ತಿಳಿಸಬೇಕು. ದೇಶದ ಕ್ರೀಡಾ ಪಟುಗಳು ಅಂತರ ರಾಷ್ಟಿçÃಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಲು ಪೂರಕವಾಗಿ ತರಬೇತಿ ನೀಡಬೇಕು. ಪುಟ್ಟ ದೇಶಗಳು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿವೆ. ನಾವು ದೇಶ ಹೆಮ್ಮೆ ಪಡುವಂಥ ಕ್ರೀಡಾ ಪಟುಗಳನ್ನು ರೂಪಿಸಬೇಕು ಎಂದು ಹೇಳಿದರು.
ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೈಹಿಕ ಶಿಕ್ಷಕರು ಜಿಲ್ಲೆ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲು ಶ್ರಮಿಸಬೇಕು. ಮಕ್ಕಳಿಗೆ ಉತ್ತಮ ತರಬೇತಿ ನೀಡಬೇಕು. ಮಕ್ಕಳ ಆರೋಗ್ಯ ವೃದ್ಧಿಗೆ ಪೂರಕವಾಗಿ ಕಾರ್ಯಕ್ರಮ ರೂಪಸಿ ಜಾರಿಗೊಳಿಸಬೇಕು. ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾರೆಡ್ಡಿ, ಜಿಲ್ಲಾ ಬಿಜೆಪಿ ಮಾಜಿ ಡಾ. ಕೆ.ಎನ್.ವೇಣುಗೋಪಾಲ್, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಗಾಯಿತ್ರಿ ಮುತ್ತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ,ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಎನ್.ಚಂದ್ರಶೇಖರ್ ಮಾತನಾಡಿದರು.
ಡಿಡಿಪಿಐ ಅಲ್ಮಾಸ್ ಫರ್ವೀನ್ ತಾಜ್, ಬಿಇಒ ಮುನಿಲಕ್ಷ್ಮಯ, ರಾಮಚಂದ್ರ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚೌಡಪ್ಪ, ಜಿಲ್ಲಾಧ್ಯಕ್ಷ ಮುರಳಿ ಮೋಹನ್, ತಾಲ್ಲೂಕು ಅಧ್ಯಕ್ಷ ವೆಂಕಟಸ್ವಾಮಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಸ್.ರೆಡ್ಡಪ್ಪ, ಪ್ರಧಾನ ಕಾರ್ಯದರ್ಶಿ ರಘುನಾಥರೆಡ್ಡಿ, ಮುಖಂಡರಾದ ಬೈರಾರೆಡ್ಡಿ, ಸಿ.ವಿ.ಶಿವಣ್ಣ, ಎನ್.ಶ್ರೀರಾಮ್ ಇದ್ದರು.


