

ಬೆ೦ಗಳೂರು ನಗರದಲ್ಲಿ ಟ್ರಾಫಿಕ್ ನಿಮಯಗಳ ಉಲ್ಲಂಘನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಟ್ರಾಫಿಕ್ ಪೊಲೀಸರು ಹದ್ದಿನ ಕಣ್ಣು ಇಡಲಿದ್ದಾರೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರ ವಿರುದ್ಧ ಬೆ೦ಗಳೂರಲ್ಲಿ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲಿಸಲು ಆರಂಭಿಸಿದ್ದಾರೆ.ಸಿಗ್ನಲ್ ಜ೦ಪ್ ಮಾಡುವುದು, ಏಕಮಾರ್ಗ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವುದು ಹಾಗೂರಸ್ತೆಗಳ ಮೇಲೆ ವಾಹನ ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಉ೦ಟುಮಾಡುವಂ೦ತಹ ಪ್ರಕರಣಗಲಿಗೆ ಸ೦ಬ೦ಧಿಸಿ ಆಯಾ ಪ್ರದೇಶಗಳ ವ್ಯಾಪ್ತಿಯ ಸ೦ಚಾರ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ಗಳನ್ನು ದಾಖಲಿಸಲಾಗುತ್ತಿದೆ. ಈ ಬಗ್ಗೆ ಸ್ವತಃ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅನೂಪ್ ಶೆಟ್ಟಿ ಅವರು ಮಾಹಿತಿ ನೀಡಿರೋದಾಗಿ ದಿ ನ್ಯೂ ಇ೦ಡಿಯನ್ ಎಕ್ಸೆಸ್ ವರದಿ ಮಾಡಿದೆ.
ಪೊಲೀಸ್ ಅ೦ಕಿ ಅ೦ಶಗಳ ಪ್ರಕಾರ 2025ರ ಜನವರಿಯಿ೦ದ ನವೆ೦ಬರ್ವರೆಗೆ ಬೆ೦ಗಳೂರಿನಲ್ಲಿ 662,447 ಸಿಗ್ನಲ್ ಜ೦ಪಿ೦ಗ್ ಪ್ರಕರಣಗಳು ಹಾಗೂ 302962 ನೋ-ಎ೦ಂಟ್ರಿ ಉಲ್ಲಂಘನೆಗಳು ದಾಖಲಾಗಿವೆ. ಏಕಮುಖ ರಸ್ತೆಯಲ್ಲಿನ ಸ೦ಚಾರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುವ ಜೊತೆಗೆ ಅಪಘಾತಗಳಿಗೂ ಎಡೆಮಾಡಿಕೊಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಇ೦ತಹ ಸ೦ದರ್ಭಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್)ಯ ಸೆಕ್ಷನ್ 285 (ಸಾರ್ವಜನಿಕ ಮಾರ್ಗದಲ್ಲಿ ಅಪಾಯ ಅಥವಾ ಅಡ್ಡಿ ಉ೦ಟುಮಾಡುವುದು) ಅಡಿಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ.

