

ವಿಜಯಪುರ: ಹಿರಿಯ ಉರ್ದು ಪತ್ರಕರ್ತ ರಫೀ ಭಂಡಾರಿ ಅವರ ವ್ಯಕ್ತಿತ್ವ ಹಾಗೂ ಪತ್ರಿಕಾ ಕ್ಷೇತ್ರದ ಸಾಧನೆ ಕುರಿತ ಅಭಿನಂದನಾ ಕೃತಿ ಬಿಡುಗಡೆ, ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ದತ್ತಿನಿಧಿ ಉಪನ್ಯಾಸ ಸ್ಥಾಪನೆ ಘೋಷಣೆ ಕಾರ್ಯಕ್ರಮ ಜ.25ರಂದು ಬೆಳಿಗ್ಗೆ 10.30ಕ್ಕೆ ನಗರದ ಮಧುವನ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪತ್ರಕರ್ತರಾದ ಅಸ್ತಾದ್ ನವಾಜ್, ಎನ್.ಹಮೀದಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಎ.ಎಂ. ಖಾನ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಹಾಗೂ ಬಿಎಲ್ಡಿಇ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಭಾಗವಹಿಸಲಿದ್ದಾರೆ.
ಹೈದರಾಬಾದ್ನ ಮೌಲಾನಾ ಆಜಾದ್ ಉರ್ದು ವಿಶ್ವವಿದ್ಯಾಲಯದ ಪ್ರೊ. ಮುಸ್ತಾಕ್ ಪಟೇಲ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ವಿಜಯಪುರದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಹಿರಿಯ ಪತ್ರಕರ್ತ ಗೋಪಾಲ ನಾಯಕ್, ಅಲ್ ಅಮೀನ್ ಚಾರಿಟೇಬಲ್ ಫಂಡ್ ಟ್ರಸ್ಟ್ನ ಟ್ರಸ್ಟಿ ರಿಯಾಜ್ ಫಾರೂಕಿ, ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸಲಾವುದ್ದೀನ್ ಪುಣೇಕರ್, ಕಾರ್ಯದರ್ಶಿ ಎ.ಎಸ್.ಪಾಟೀಲ್ ಹಾಗೂ ವಿಜಯಪುರ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಯಡಹಳ್ಳಿ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ಎಂ. ಪಾಟೀಲ್ ಗಣಿಹಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

