

ಸಿಯೋನ್ ಆಶ್ರಮ ಟ್ರಸ್ಟ್ (ರಿ.) ಗಂಡಿಬಾಗಿಲು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ದಿನಾಂಕ:26.01.2026ರಂದು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಪರಸ್ಪರ ಪ್ರೀತಿ, ಸಮಾನತೆ, ಒಗ್ಗಟ್ಟಿನಿಂದ ಬಾಳಬೇಕು ಎಂದರು.
ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ತದನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಸಂಸ್ಥೆಯ ಸಿಬ್ಬಂದಿ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.



