

ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ, ಈಚೆಗೆ ಕೋಲಾರದಲ್ಲಿ ನಿಧನರಾದ ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ್ ಅವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ, ಈಚೆಗೆ ಕೋಲಾರದಲ್ಲಿ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಂ.ಜಿ.ಪ್ರಭಾಕರ್ ಅವರಿಗೆ ಶ್ರದ್ಧಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ನಾಗರಾಜ್, ಹಿರಿಯ ಪತ್ರಕರ್ತರಾದ ಆರ್.ಚೌಡರೆಡ್ಡಿ, ಕೆ.ಎಂ.ಚೌಡಪ್ಪ, ಕೆ.ವಿ.ನಾಗರಾಜ್, ವೇಣುಗೋಪಾಲ್, ಮುರಳಿ ಮೋಹನ್, ವೇಣುಗೋಪಾಲ್, ಪತ್ರಕರ್ತರಾಗಿ ಎಂ.ಜಿ.ಪ್ರಭಾಕರ್ ಅವರ ಸೇವೆ ಹಾಗೂ ಸಾಧನೆ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ದಿವಂಗತ ಎಂ.ಜಿ.ಪ್ರಭಾಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ತಾಲ್ಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷಣ್, ಖಜಾಂಚಿ ಎಸ್.ಲಕ್ಷಣ್ ಬಾಬು, ಪತ್ರಕರ್ತರಾದ ಚಲಪತಿ, ಉಪೇಂದ್ರ, ನಾರಾಯಣಮೂರ್ತಿ, ಶಬ್ಬೀರ್ ಅಹ್ಮದ್, ಎಸ್.ಕಿಶೋರ್ ಕುಮಾರ್, ನಾಗೇಂದ್ರ, ಸುರೇಶ್, ರವಿಕುಮಾರ್, ಕೋಮುಲ್ ನಿರ್ದೇಶಕ ಕೆ.ಕೆ.ಮಂಜು ಇದ್ದರು.

