

ಶ್ರೀನಿವಾಸಪುರ : ತಾಲ್ಲೂಕಿನ ರೋಣುರು ಗ್ರಾಮಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷರು ಹಾಗೂ ಸದಸ್ಯರ ಸಮನ್ವಯ ಮತ್ತು ಸಹಕಾರದಿಂದ ಪಂಚಾಯಿತಿಯ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸಮಗ್ರ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕೆ. ಮಹೇಶ್ ತಿಳಿಸಿದರು.
ಸೋಮವಾರ ರೋಣುರು ಗ್ರಾಮಪಂಚಾಯಿತಿ ಕಚೇರಿಯಲ್ಲಿ ಅಧ್ಯಕ್ಷೆ, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನರೇಗಾ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ ರೋಣುರು ಗ್ರಾಮಪಂಚಾಯಿತಿ 2025–26 ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಗ್ರಾಮ ಪಂಚಾಯಿತಿ ಎಂಬ ಗೌರವಕ್ಕೆ ಪಾತ್ರವಾಗಿದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿಗೆ 40 ಲಕ್ಷ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಅಲ್ಲದೆ, ಎಲ್ಲಾ ಸದಸ್ಯರ ಸಹಕಾರದಿಂದ 2026–27 ಸಾಲಿನ ಕ್ರಿಯಾ ಯೋಜನೆ ಹಾಗೂ ಬಜೆಟ್ಗೆ ಸರ್ವಾನುಮತದ ಅನುಮೋದನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವವಮ್ಮ, ಉಪಾಧ್ಯಕ್ಷ ವೆಂಕಟರಮಣಾರೆಡ್ಡಿ, ಸದಸ್ಯರಾದ ಕವಿತಾ ಎಂ.ಎಸ್., ಪ್ರಮೀಳಮ್ಮ, ರಾಧಮ್ಮ, ಆರ್.ಕೆ. ಮಂಜುನಾಥ, ಡಿ.ಬಿ. ಶಿವಣ್ಣ, ಕದಿರಪ್ಪ, ಕೆ.ಜಿ. ಓಬಳೇಶಪ್ಪ, ಸರಸ್ವತಮ್ಮ, ಎಲ್.ವಿ. ಚೇತನ್, ಮುನಿಯಮ್ಮ, ಅಮರಾವತಮ್ಮ, ಎನ್.ಆರ್. ಆಂಜನೇಯರೆಡ್ಡಿ, ಕೆ.ಆರ್. ರುಕ್ಮಣಿಯಮ್ಮ, ಆರ್.ಟಿ. ಮಂಜುನಾಥ ಹಾಗೂ ಕೆ.ಪಿ. ನಾಗರಾಜ್ ಉಪಸ್ಥಿತರಿದ್ದರು.


