

ಶ್ರೀನಿವಾಸಪುರ : ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಆಯುಷ್ ಇಲಾಖೆ ವತಿಯಿಂದ ರೋಗ ನಿರೋಧಕ ಶಕ್ತಿ ವರ್ಧಕ ಔಷಧಿಗಳ ಕಿಟ್ಗಳನ್ನು ಪಟ್ಟಣದ ಆಟೋ ಚಾಲಕರಿಗೆ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಕಿಟ್ಗಳನ್ನು ವಿತರಿಸಿ ಮಾತನಾಡಿದರು.
ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರೋಗ ನಿರೋಧಕ ಶಕ್ತಿ ಪ್ರಮುಖವಾಗಿದ್ದು, ಆಯುಷ್ ಪದ್ಧತಿಯಲ್ಲಿ ನೀಡುವ ಔಷಧಿಗಳು ಸಾಮಾನ್ಯ ಜನರ ಆರೋಗ್ಯಕ್ಕೆ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.
ಆಟೋ ಚಾಲಕರು ಸಾರ್ವಜನಿಕ ಸಂಪರ್ಕದಲ್ಲಿರುವುದರಿಂದ ಆರೋಗ್ಯದ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಜಿ.ಎನ್. ಸುದೀಂದ್ರ, ಇಒ ಕೆ. ಸವೇ೯ಶ್, ಡಾ. ರೇಣುಕಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

