

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ಕರ್ನಾಟಕ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಫೆ.೨೩ ರಂದು ಮೊಗವೀರ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಸಮುದಾಯ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಅರಣ್ಯಹಕ್ಕು ಹೋರಾಟಗಾರರ ವೇದಿಕೆಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅರಣ್ಯ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಗ್ರ ಮಾತುಕತೆ ನಡೆಸಲಾಯಿತು. ಈ ಸಭೆಯಲ್ಲಿ ಸಚಿವರಾದ ಶ್ರೀ ಮಂಕಾಳ ವೈದ್ಯ ಅವರು ಉಪಸ್ಥಿತರಿದ್ದರು.



