

ಕುಂದಾಪುರ: ಫೆಬ್ರವರಿ 28ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್.ಸಿ.ಸಿ (ನೌಕಾದಳ ಮತ್ತು ಭೂದಳ), ರೆಡ್ ಕ್ರಾಸ್ ಘಟಕ, ರೇಂಜರ್ಸ್ ಮತ್ತು ರೋವರ್ಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಕ್ಲಬ್ ಹಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ “ಸ್ವಯಂ ರಕ್ತದಾನ ಶಿಬಿರ ನಡೆಯಿತು.
ಲಯನ್ಸ್ ಕ್ಲಬ್, ಹಂಗಳೂರು ಇದರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಹಂಗಳೂರು ಇದರ ಕಾರ್ಯದರ್ಶಿಗಳಾದ ವಿಲ್ಫ್ರೆಡ್ ಮೆನೆಜರ್ಸ್ಯ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ ಅರುಣ್ ಎ.ಎಸ್, ರಾಮಚಂದ್ರ ಆಚಾರಿ , ಎನ್.ಸಿ.ಸಿ ಅಧಿಕಾರಿಗಳಾದ ಶರಣ್ ಎಸ್.ಜೆ, ಅಂಜನ್ ಕುಮಾರ್. ಎ.ಎಲ್, ರೇಂಜರ್ಸ್ ಮತ್ತು ರೋವರ್ಸ್ ಅಧಿಕಾರಿಗಳಾದ ರಿತಿನ್ ಕುಮಾರ್ ಮತ್ತು ಅಕ್ಷತಾ ಉಪಸ್ಥಿತರಿದ್ದರು.
208 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಯೋಜಕರಾದ ಪ್ರೊ. ಸತ್ಯನಾರಾಯಣ ಸ್ವಾಗತಿಸಿದರು. ಯೂಥ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಆಧಿಕಾರಿ ವಿದ್ಯಾರಾಣಿ ವಂದಿಸಿದರು. ವಿದ್ಯಾರ್ಥಿನಿ ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು.



