

ಜ್ಞಾನದಾ ಶಿಕ್ಷಣ ಸಂಸ್ಥೆಯ ಅಧೀನದ ಜ್ಞಾನದಾ ಎಚ್ ಪಿ ಎಸ್ ಶಾಲೆಯ ನರ್ಸರಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಶುಕ್ರವಾರ ನಡೆಯಿತು. ಸಂಸ್ಥೆಯ ಕಾರ್ಯದರ್ಶಿ ಧೀರಜ್ ಆರ್ ಶಿರೂರ್ಕರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು
ಸಂಸ್ಥೆಯ ಖಜಾಂಚಿ ಶ್ರೀಮತಿ ಚಂಪಾ ಆರ್ ಶಿರೂರ್ಕರ್ ಮಾತನಾಡಿ ಮಕ್ಕಳಿಗೆ ಹೊರೆಯಾಗದ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ ಮಕ್ಕಳಿಗೆ ಸಂಸ್ಕಾರ ಕಲಿಸುವಲ್ಲಿ ಪೋಷಕರ ಪಾತ್ರ ಅತೀ ಅಗತ್ಯ ಶಿಕ್ಷಕರೊಂದಿಗೆ ಪೋಷಕರು ಕೈ ಜೋಡಿಸಿದರೆ ಮಾತ್ರ ಸಂಸ್ಕಾರಭರಿತ ಮಗುವೊಂದು ಬೆಳೆಯಲು ಸಾಧ್ಯ ಈ ದಿಶೇಯಲ್ಲಿ ಪಾಲಕರ ಸಹಕಾರವನ್ನು ಸ್ಮರಿಸಿದರು
ಈ ಸಂದರ್ಭದಲ್ಲಿ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಯು ಕೆ ಜಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಲಾಯಿತು ಪೋಷಕರು ಶಿಕ್ಷಕರು ಉಪಸ್ಥಿತರಿದ್ದರು ಪ್ರಾಂಶುಪಾಲ ಡಾ. ರವಿದಾಸ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಐಶ್ವರ್ಯ ಸ್ವಾಗತಿಸಿದರು, ಧನ್ವಿ ವಂದಿಸಿದರು ಅಂಜಲಿ ಕಾರ್ಯಕ್ರಮ ನಿರೂಪಿಸಿದರು

