

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾರ್ಚ್ 27,28 ಮತ್ತು 29ರಂದು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮಗಳು ನಡೆಯಲಿವೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮಾರ್ಚ್ 28ರಂದು ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಮೈಸೂರು ಮರ್ಚಂಟೈಲ್ ಕಂಪೆನಿ ಲಿಮಿಟೆಡ್ ಇದರ ಅಧ್ಯಕ್ಷರು ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ), ಬೆಂಗಳೂರು ಇದರ ಅಧ್ಯಕ್ಷರಾದ ಡಾ.ಹೆಚ್.ಎಸ್.ಶೆಟ್ಟಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಮಂಗಳೂರು ಇದರ ಮುಖ್ಯ ಕಚೇರಿಯ ಮುಖ್ಯ ವ್ಯವಹಾರಿಕ ಅಧಿಕಾರಿ ಚಂದ್ರಶೇಖರ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ.ಶಾಂತಾರಾಮ ಪ್ರಭು ವಹಿಸಲಿದ್ದಾರೆ.
ವಾರ್ಷಿಕೋತ್ಸವದಂದು ನಿವೃತ್ತ ಪ್ರಾಧ್ಯಾಪಕರು, ರ್ಯಾಂಕ್ ವಿಜೇತರು, ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.
ಮಾರ್ಚ್ 27ರಂದು ವಿದ್ಯಾರ್ಥಿಗಳಿಗಾಗಿ “ನಾಟ್ಯ ತರಂಗ” ಪ್ರತಿಭಾ ಪ್ರದರ್ಶನ ನಡೆಯಲಿದೆ. ಮಾರ್ಚ್ 29 ರಂದು “ಪ್ರಾಕ್ತನ ವಿದ್ಯಾರ್ಥಿಗಳ ಸಮಾವೇಶ -2026” ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


