
ಕುಂದಾಪುರ: ಮಣಿಪಾಲ ಅಕಾಡೆಮಿ ಆಡಳಿತಾಧಿಕಾರಿಯಾಗಿದ್ದ ಸ್ವಪ್ನಶಿಲ್ಪಿ ಡಾ ಹೆಚ್. ಶಾಂತಾರಾಮ್ ಅವರ ಹೆಸರಿನಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜು ದತ್ತಿನಿಧಿ ಸ್ಥಾಪಿಸಿ ಪ್ರತಿವರ್ಷ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡುತ್ತಾ ಬಂದಿದೆ.
ಈ ವರ್ಷ ಸಣ್ಣಕಥೆಯನ್ನು ಪರಿಗಣಿಸಿದ್ದು , 2024 ಮತ್ತು 2025ರ ಅವಧಿಯಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು ಮತ್ತು ಲೇಖಕರು ಸಣ್ಣ ಕಥಾಸಂಕಲನದ ನಾಲ್ಕು ಪ್ರತಿಗಳನ್ನು 10ಮೇ 2026 ರೊಳಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ 576201 ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ಕೋರಲಾಗಿದೆ.ಈಗಾಗಲೇ ಪ್ರಶಸ್ತಿ ಪಡೆದವರಿಗೆ ಅವಕಾಶವಿರುವುದಿಲ್ಲ.
ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು ಹದಿನೈದು ಸಾವಿರ ರೂಪಾಯಿಯೊಂದಿಗೆ ಬೆಳ್ಳಿ ಫಲಕ ನೀಡಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 8792107369 ಸಂಪರ್ಕಿಸಬಹುದು.

