

ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವ್ಯಕ್ತಿತ್ವ ವಿಕಸಿನ ರೂಪಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಅವರು ಏಪ್ರಿಲ್ 3ರಂದು ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಮತ್ತು ಸೇವಾ ಮನೋಭಾವವನ್ನು ತುಂಬುತ್ತದೆ. ವಿದ್ಯಾರ್ಥಿಗಳು ಈ ಶಿಬಿರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ,ಶ್ರೀ ನಾಗೇಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಿದ್ದಾಪುರ, ಶ್ರೀ ರೋಹಿತ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಶ್ರೀ ಶೇಖರ್ ಕುಲಾಲ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಶ್ರೀ ರಾಮದಾಸ ಪ್ರಭು, ಸಿದ್ದಾಪುರ,ಶ್ರೀ ಭೋಜ ಶೆಟ್ಟಿ,ಅಧ್ಯಕ್ಷರು, ಹಿರಿಯ ನಾಗರಿಕರ ವೇದಿಕೆ, ಸಿದ್ಧಾಪುರ, ಶ್ರೀ ಚಂದ್ರ ಕುಲಾಲ್, ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢಶಾಲೆ, ಸಿದ್ದಾಪುರ, ಶ್ರೀ ವಿಶ್ವನಾಥ ತುಂಬಿಕಲ್ಲಾಯ,ಅಧ್ಯಕ್ಷರು,ಎಸ್ .ಡಿ.ಎಮ್ ಸಿ, ಸರಕಾರಿ ಪ್ರೌಢ ಶಾಲೆ, ಸಿದ್ಧಾಪುರ ಮತ್ತು ಶ್ರೀ ಎಸ್.ಕೆ.ವಾಸುದೇವ ಪೈ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರು ಹಾಗೂ ಏನ್ ಎಸ್ ಎಸ್ ಯೋಜನಾಧಿಕಾರಿಗಳಾದ ಶ್ರೀ ಅರುಣ್ ಎ ಎಸ್ ಉಪಸ್ಥಿತರಿದ್ದರು. ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರ್ ಇವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.
ವಿದ್ಯಾರ್ಥಿನಿಯರಾದ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ ವತ್ಸಲಾ ವಂದಿಸಿದರು.












