

ಕುಂದಾಪುರ ; ಆರ್.ಎನ್ ಶೆಟ್ಟಿ ಸಂಯುಕ್ತ ಪ. ಪೂ. ಕಾಲೇಜು, ಪಿಯು ಅಂತಿಮ ಪರೀಕ್ಷೆಯಲ್ಲಿ ಶೇ. 99.1 ಫಲಿತಾಂಶ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್ ಶೆಟ್ಟಿ ssಸಂಯುಕ್ತ ಪದವಿಪೂರ್ವ ಕಾಲೇಜು ಶೇ. 99.1 % ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಕುಳಿತ 328 ವಿದ್ಯಾರ್ಥಿಗಳಲ್ಲಿ 325 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 140 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 161 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಸ್ನೇಹಾ 592 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಗೂ ಕಾಜಿ ಮೊಹಮ್ಮದ್ ರೈಹಾನ್ 590 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 10 ಸ್ಥಾನಿಯಾಗಿ ಕಾಲೇಜಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಕೌಶಿಕ್ ಎ ಶೆಟ್ಟಿ 585 ಅಂಕಗಳನ್ನು ಗಳಿಸಿ ಕಾಲೇಜಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಕೃತಿ ಕೆ. ದೇವಾಡಿಗ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ಸ್ಥಾನಿಯಾಗಿ, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಾನ್ವಿ ಜಿ ಪೂಜಾರಿ 589 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 12 ನೇ ಸ್ಥಾನಿಯಾಗಿ, ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಶ್ರೀರಕ್ಷಾ 586 ಅಂಕ ಗಳಿಸಿ ತೃತೀಯ ಸ್ಥಾನಿಯಾಗಿದ್ದಾರೆ.
ಇವರನ್ನು ಕುಂದಾಪುರ ಎಜುಕೇಶನ್ ಸೊಸೈಟಿ ಯ ಸಂಚಾಲಕರಾದ ಶ್ರೀ ಬಿ ಎಂ ಸುಕುಮಾರ ಶೆಟ್ಟಿಯವರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳು




ವಾಣಿಜ್ಯ ವಿಭಾಗದಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳು






