

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಟ್ಟಣದ ಪತ್ರಕರ್ತರ ಭವನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 136ನೇ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ಸಿ. ನಾಗರಾಜ ಅವರು ಅಧ್ಯಕ್ಷತೆ ವಹಿಸಿದರು. ಹಿರಿಯ ಪತ್ರಕರ್ತರಾದ ಆರ್. ಚೌಡರೆಡ್ಡಿ, ಕೆ.ಎಂ. ಚೌಡಪ್ಪ, ಶಬ್ಬೀರ್ ಅಹ್ಮದ್ ಹಾಗೂ ಆರ್. ಜಿ. ನರಸಿಂಹಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆರ್. ಜಿ. ನರಸಿಂಹಯ್ಯ ಅವರು ಸಂವಿಧಾನದ ಪೀಠವನ್ನು ಓದಿ, ಎಲ್ಲರಿಗೂ ಪ್ರತಿಜ್ಞೆ ಮಾಡಿಸಿದರು. ಸಂವಿಧಾನದ ಮೌಲ್ಯಗಳು, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಧರ್ಮನಿರಪೇಕ್ಷತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮರಿಪಳ್ಳಿ ಎಂ. ಲಕ್ಷ್ಮಣ್, ಖಜಾಂಚಿ ಲಕ್ಷ್ಮಣ್ ಬಾಬು, ಉಪಾಧ್ಯಕ್ಷ ಸಿ.ಕೆ. ಲಕ್ಷ್ಮಣ್, ಕಾರ್ಯದರ್ಶಿ ನಾರಾಯಣಮೂರ್ತಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸದಸ್ಯ ಉಪೇಂದ್ರ ಬಿ.ಕೆ., ತಾಲ್ಲೂಕು ಸಂಘದ ಸದಸ್ಯರಾದ ರವಿಕುಮಾರ್, ಆರ್. ಕಿಶೋರ್ ಕುಮಾರ್ ಎಸ್., ಕೆ.ವಿ. ಸುರೇಶ್, ಹೆಚ್. ರಮೇಶ್, ಎಸ್. ವೇಣುಗೋಪಾಲ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅಂಬೇಡ್ಕರ್ ಅವರ ಆದರ್ಶಗಳನ್ನು ಸ್ಮರಿಸಿ, ಸಂವಿಧಾನದ ಮೌಲ್ಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು

