

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿಗಳ ಅನುಷ್ಠಾನ ಕುರಿತು ಅನುಷ್ಠಾನ ಸಮಿತಿ ಸಭೆ ಏರ್ಪಡಿಸಲಾಗಿತ್ತು.
ಪಂಚ ಗ್ಯಾರಂಟಿಗಳ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ವಿ.ಮನೋಹರ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಸಾರ್ವಜನಿಕರಿಂದ ದೂರಗಳು ಬರಂದತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಫಲಾನುಭವಿಗಳ ಹಿತ ಕಾಯುವುದು ಪಂಚ ಗ್ಯಾರಂಟಿ ಅನುಷ್ಠಾನ ಸಮತಿಯ ಉದ್ದೇಶವಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಸಮಸ್ಯೆ ಕಂಡುಬAದಲ್ಲಿ ತಕ್ಷಣ ಪರಿಹರಿಸಲು ಮುಂದಾಗಬೇಕು. ಪ್ರತಿ ತಿಂಗಳೂ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಒಂದು ಸಭೆಯಲ್ಲಿ ಕಂಡು ಬಂದ ಸಮಸ್ಯೆಗಳನ್ನು ಮುಂದಿನ ಸಭೆಯ ಹೊತ್ತಿಗೆ ಬಗೆಹರಿಸಿರಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಸರ್ವೇಶ್ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದು ಸಲಹೆ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಯ ತಿದ್ದುಪಡಿಗಳನ್ನು ಪೂರ್ಣಗೊಳಿಸಲಾಗಿದೆ. ತಾಲ್ಲೂಕು ಅನುಷ್ಠಾನದಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಗೃಹಜ್ಯೋತಿ ಯೋಜನೆಗಳ ಮೀಟರ್ ರೀಡಿಂಗ್ ಸಕಾಲದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಅನುಷ್ಠಾನದಲ್ಲಿ ತಾಲ್ಲೂಕು ಮೊದಲ ಸ್ಥಾನಕ್ಕೆ ಬರುವಂತೆ ಕಾರ್ಯನಿರ್ವಹಿಸಲಾಗುವುದು. ಎಲ್ಲ ಫಲಾನುಭವಿಗಳನ್ನೂ ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಯಾವುದೇ ಫಲಾನುಭವಿ ಯೋಜನೆಯಿಂದ ಹೊರಗೆ ಉಳಿಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

