

ಕುಂದಾಪುರ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದಾಖಲಿಸಿದೆ. ಒಟ್ಟು 37 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 3 ಮಂದಿ ವಿಶಿಷ್ಟ ಶ್ರೇಣಿ 25 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ 7 ಮಂದಿ ವಿದ್ಯಾಥಿಗಳು ದ್ವಿತೀಯ ದರ್ಜೆ ಹಾಗೂ ಇಬ್ಬರು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ರಕ್ಷಾ ಪೂಜಾರಿ 561 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಹಾಗೂ ಪಲ್ಲವಿ 555 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ತನ್ವಿ 540 ಅಂಕ ಗಳಿಸಿ ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಜಂಟಿ ಕಾರ್ಯದರ್ಶಿ ಭಗಿನಿ ಸುಪ್ರಿಯಾ ಎ.ಸಿ. ಹಾಗೂ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಭಗಿನಿ ನಿರ್ಮಲಾ ಎಂ. ಪಿಂಟೊ ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ಪೋಷಕರು, ಶಾಲಾ ಅಭಿಮಾನಿಗಳು ಅಭಿನಂದಿಸಿದ್ದಾರೆ.




