

ಬೆಂಗಳೂರು: ವಸತಿ ಇಲಾಖೆ, ಕರ್ನಾಟಕ ಗೃಹ ಮಂಡಳಿ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕು ಸೂರ್ಯ ನಗರ ನಾಲ್ಕನೇ ಹಂತ ಕೆ.ಹೆಚ್.ಬಿ. ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ನಾಳೆ ಶಂಕುಸ್ಥಾಪನೆ ನೆರವೇರಿಸಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ, ಆನೇಕಲ್ ಶಾಸಕ ಬಿ. ಶಿವಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್, ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಡಿ.ಕೆ. ಸುರೇಶ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿಗಳ ನಮ್ಮ ಮನೆ ಯೋಜನೆಗೆ ಚಾಲನೆ ನೀಡಲಾಗುವುದು. ಸೂರ್ಯ ಶೈನ್ ಮತ್ತು ಸೂರ್ಯ ಡಿವೈನ್ ವಸತಿ ಸಮುಚ್ಚಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು.ವಸತಿ ಯೋಜನೆಗೆ ಭೂಮಿ ನೀಡಿದ ಭೂ ಮಾಲೀಕರುಗಳಿಗೆ ಸಾಂಕೇತಿಕ ನಿವೇಶನ ಹಂಚಿಕೆ ಮಾಡಲಾಗುವುದು. ಮುಖ್ಯಮಂತ್ರಿಯವರ ಅಮೃತ ಹಸ್ತದಿಂದ ಸಾರ್ವಜನಿಕ ಅರ್ಜಿದಾರರಿಗೆ ನಿವೇಶನ ಹಂಚಿಕೆ ಮಾಡಲಾಗುವುದು.
ಮೇ 23ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ಇಂಡ್ಲವಾಡಿ ಗ್ರಾಮ ಕೆ.ಹೆಚ್.ಬಿ. ಸೂರ್ಯ ಕ್ರೀಡಾ ಗ್ರಾಮದ ನಾಲ್ಕನೇ ಹಂತದಲ್ಲಿ ಕಾರ್ಯಕ್ರಮ ನಡೆಯಲಿದೆ.

