

ಕುಂದಾಪುರ ; ದಿನಾಂಕ 05-6-2026 ರಂದು ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಿಸಿದ ಘೋಷಣೆಗಳನ್ನು ಪ್ರದರ್ಶಿಸಿದರು. ಪರಿಸರಕ್ಕೆ ಸಂಬಂಧಿಸಿದ ಗೀತೆಯನ್ನು ವಿದ್ಯಾರ್ಥಿಗಳು ನೆರವೇರಿಸಿದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಶ್ರೀಲತಾ ಇವರು ವಿಶ್ವ ಪರಿಸರ ದಿನದ ಮಹತ್ವದ ಬಗ್ಗೆ ಮಾತನಾಡಿ ಪ್ರತಿಯೊಂದು ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸುತ್ತಲಿನ ಪರಿಸರ ಎಷ್ಟು ಚೆನ್ನಾಗಿರುತ್ತದೆಯೋ ಅಷ್ಟೇ ನಾವು ಆರೋಗ್ಯವಾಗಿರುತ್ತೇವೆ. ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ಬೆಳೆಸಿದರೆ ಪರಿಸರ ಸಮೃದ್ಧಿಯಾಗಿರುತ್ತದೆ. ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದರು.









Click the link below to join our Jananudi news group – Also please share this link to others ನಮ್ಮ ಜನನುಡಿ ವಾರ್ತೆಗಳ ಗುಂಪಿಗೆ ಸೇರಲು ಕೆಳಗಿನ ಲಿಂಕನ್ನು ಒತ್ತಿ – ಹಾಗೆಯೇ ದಯವಿಟ್ಟು ಈ ಲಿಂಕನ್ನು ಇತರರಿಗೆ ಹಂಚಿಕೊಳ್ಳಿ
https://chat.whatsapp.com/Jzo3n2pfyqTIA6ZswdOSH6 (jananudi Mangaluru)

