

ಕುಂದಾಪುರ; ಸಂತ ಮೇರಿ ಹಾಗೂ ಹೋಲಿ ರೋಸರಿ ಸಮೂಹ ಸಂಸ್ಥೆಗಳ ಜಂಟಿ ಕಾರ್ಯದರ್ಶಿಗಳಾದ ಅತೀ ವಂದನೀಯ ಗುರು ಪೌಲ್ ರೆಗೋ ಅವರ 62ನೇ ಜನ್ಮದಿನವನ್ನು ಸಂಸ್ಥೆಯ ಅಭಿವೃದ್ಧಿಗಾಗಿ ಅವರು ನೀಡಿರುವ ಅಮೂಲ್ಯ ಮಾರ್ಗದರ್ಶನ, ಸಹಕಾರ ಹಾಗೂ ಸೇವೆಗಳಿಗೆ ಕೃತಜ್ಞತೆಯ ಸೂಚಕವಾಗಿ ದಿನಾಂಕ 06.06.2026 ರಂದು ಸಮೂಹ ಸಂಸ್ಥೆಗಳ ಸಭಾಂಗಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಹೋಲಿ ರೋಜರಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ಪೌಲ್ ರೆಗೋರವರು ವಹಿಸಿದ್ದರು. ಹೋಲಿ ರೋಜರಿ 5 ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಂದನೀಯ ಗುರುಗಳು ಕೇಕ್ ಅನ್ನು ಕತ್ತರಿಸುವುದರ ಮೂಲಕ ವಿದ್ಯಾರ್ಥಿಗಳೊಂದಿಗೆ ತಮ್ಮ ಹುಟ್ಟು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಸಂತ ಮೇರಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಪ್ರಾರ್ಥಿಸಿದರು. ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಮ್ಮ ಶುಭಾಶಯದ ಹಾಡಿನ ಮೂಲಕ ಗುರುಗಳಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಸಮೂಹ ಶಿಕ್ಷಣ ಸಂಸ್ಥೆಯ ಶಿಕ್ಷಕ ವೃಂದದ ಎಲ್ಲಾ ಭೋದಕ ಮತ್ತು ಭೋದಕೇತರ ಸಿಬ್ಬಂದಿ ರವರ್ಗದವರು ಶುಭ ಹಾರೈಸಿದರು.
ಸಂತ ಮೇರಿ ಪದವಿ ಪೂರ್ವ ಕಾಲೇಜ್ ಹಾಗೂ ಹೋಲಿ ರೋಜರಿ ಆಂಗ್ಲ ಮಾದ್ಯಮ ಶಾಲೆಯ ಪ್ರಾಂಶುಪಾಲ ವಂ।ಧರ್ಮಗುರು ರೊಲ್ವಿನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾಗಿರುವ ಶ್ರೀಯುತ ನಾಗರಾಜ ಶೆಟ್ಟಿಯವರು ಕಾರ್ಯಕ್ರಮ ನಿರೂಪಿಸಿದರು. ಹೋಲಿ ರೋಜರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಮಾರ್ಗದರ್ಶಕರಾಗಿರುವ ಸಹ ಶಿಕ್ಷಕಿ ಶ್ರೀಮತಿ ನೀತಾ ಮೆಂಡೋನ್ಸಾ ರ್ವರನ್ನು ಸ್ವಾಗತಿಸಿದರು. ಸೈಂಟ್ ಮೇರಿಸ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಶೈನಾ ಬರೆಟ್ಟೊ ಧನ್ಯವಾದ ಸಮರ್ಪಿಸಿದರು.

















