

ಕುಂದಾಪುರ ; ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ದಿನಾಂಕ 5 ಜೂನ್ 2026ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ದಿನದಂದು ಎಂಬಿಎ ವಿದ್ಯಾರ್ಥಿಗಳಿಗೆ ಪರಿಸರ ಹಾನಿ ಇಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಪರಿಸರವನ್ನು ಹೇಗೆ ಸಂರಕ್ಷಿಸಬೇಕು ಎನ್ನುವುದರ ಕುರಿತು ವಿದ್ಯಾರ್ಥಿಗಳಿಗೆ ವೀಡಿಯೊ ಪ್ರದರ್ಶಿಸಲಾಯಿತು. ಇದರ ಜೊತೆಗೆ ಪರಿಸರವನ್ನು ಉಳಿಸಿ ಬೆಳೆಸುವ ಬಗೆಗೆ ವಿದ್ಯಾರ್ಥಿಗಳಿಂದ ಪ್ರತಿಜ್ಞೆಯನ್ನು ಕೂಡ ಕೈಗೊಳ್ಳಲಾಯಿತು. ಹಾಗೆ ಕಾಲೇಜಿನ ಸುತ್ತಮುತ್ತ ಪರಿಸರದ ಕಸ ಹೆಕ್ಕುದರ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಉಸ್ತುವಾರಿಯನ್ನು ಸಹಾಯಕ ಪ್ರಾಧ್ಯಾಪಕರಾದ ಕು. ಚೈತಾಲಿ ಇವರು ವಹಿಸಿದ್ದರು.

