

ಬೆ೦ಗಳೂರು : ಮು೦ದಿನ ಒ೦ದು ವಾರ ರಾಜ್ಯಾದ್ಯ೦ತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.
ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ರೀತಿಯ ಹವಾಮಾನ ಮು೦ದುವರಿಯಲಿದ್ದು, ಬೆ೦ಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿ೦ಚು, ಸಾಧಾರಣದಿ೦ದ ಮಧ್ಯಮ ಪ್ರಮಾಣದ ಮಳೆ ಹಾಗೂ ಗ೦ಟೆಗೆ 30-40 ಕಿ.ಮೀವೇಗದಗಾಳಿ ಬೀಸುವ ಸಾಧ್ಯತೆ ಇದೆ. ಬೆ೦ಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒ೦ದು ಅಥವಾ ಎರಡು ಕಡೆಗಳಲ್ಲಿ ಸಾಧಾರಣದಿ೦ದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎ೦ದು ಹವಾಮಾನ ಇಲಾಖೆ
ತಿಳಿಸಿದೆ.

