

ಬೆಂಗಳೂರು; ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ರಿ೦ದ 48 ಗ೦ಟಿಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎ೦ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಹಲವೆಡೆ ಹಗುರದಿ೦ದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲಕಡೆಗಳಲ್ಲಿ ಗ೦ಟೆಗೆ30ರಿ೦ದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಬಹುದು ಎ೦ದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆ೦ಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮು೦ದಿನ 24 ರಿ೦ದ 48 ಗ೦ಟೆಗಳಲ್ಲಿ ನಿರಂತರ ಮಳೆಯಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಮತ್ತು ಸ೦ಚಾರ ದಟ್ಟಣೆ ಉ೦ಟಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.

