

ಕುಂದಾಪುರ; ದಿನಾಂಕ 22-06-2026 : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಫಾ. ರೊಲ್ವಿನ್ ಫೆರ್ನಾಂಡೀಸ್ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಕೆ. ವಿವೇಕ್ ಪೈ ಇವರು ಅತಿಥಿಗಳಾಗಿ ಆಗಮಿಸಿ ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯೋಗಭ್ಯಾಸವನ್ನು ರೂಡಿಸಿಕೊಳ್ಳಬೇಕೆಂದು ಹೇಳಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಯುತ ಚಿದಾನಂದರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮೆರುಗನ್ನು ನೀಡಿದರು. ಈ ಸಭೆಯಲ್ಲಿ ಶಾಲಾ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.








