

ಮಂಗಳೂರು; “ದೈನಂದಿನ ಚಟುವಟಿಕೆಗಳಲ್ಲಿ ಯೋಗ ಅಭ್ಯಾಸವನ್ನು ಅಳವಡಿಸಿಕೊಂಡು ಆರೋಗ್ಯಯುತ ಜೀವನ ಶೈಲಿಯನ್ನು ರೂಡಿಸಿಕೊಳ್ಳಿ” ಎಂಬುವುದಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಅಲೋಶಿಯಸ್ ಡಿಸೋಜರವರು ವಿದ್ಯಾರ್ಥಿಗಳನ್ನುದ್ದೇಶಿಸಿ ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಯುತ ಪ್ರಮೊದ್ ಅರಿಗ ಮತ್ತು ಹಿರಿಯ ಶಿಕ್ಷಕಿ ಲವೀನ ಡಿಕುನ್ಹಾ , ವೇದಿಕೆಯಲ್ಲಿದ್ದರು. ಹಾಗೂ ಶಾಲಾ ನಾಯಕ ಹರ್ಷವರ್ಧನ್ , ಶಾಲಾ ಉಪನಾಯಕಿ ಜೇನ್ , ಮತ್ತು ಇತರ ವಿದ್ಯಾರ್ಥಿ ಮಂತ್ರಿಗಳು ಉಪಸ್ಥಿತರಿದ್ದರು.
ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಯೋಗ ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳು ಯೋಗದ ಮಹತ್ವವನ್ನು ಸಮೂಹ ಗೀತೆಯ ಮೂಲಕ ಪ್ರಸ್ತುತಪಡಿಸಿದರು.
9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಆಜ್ಞಾ ಯೋಗದ ಪ್ರಾಮುಖ್ಯತೆ ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸುಧಾಕರ್ ಮತ್ತು ಹರಿಣಾಕ್ಷಿ ಇವರ ನೇತ್ರತ್ವದಲ್ಲಿ ಸಂಯೋಜನೆಗೊಂಡ ಕಾರ್ಯಕ್ರಮವನ್ನು 9ನೇ ತರಗತಿ ವಿದ್ಯಾರ್ಥಿ ಮಯಾಂಕ್ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.













