

ಕುಂದಾಪುರ; ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇಲ್ಲಿನ ಎಂಬಿಎ ವಿಭಾಗದ ವತಿಯಿಂದ ಒಂದು ದಿನದ ಇಂಡಸ್ಟ್ರಿಯಲ್ ವಿಸಿಟ್ ಕೈಗೊಳ್ಳಲಾಯಿತು. ಈ ಪ್ರಯುಕ್ತ ಸ್ಥಳೀಯ ACEBOND ಕೈಗಾರಿಕೆಗೆ ಭೇಟಿ ನೀಡಿದರು. ಈ ಭೇಟಿಯ ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯ ವೈಖರಿ ಹಾಗೂ ನಿರ್ವಹಣಾ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದುಕೊಂಡರು .
ಭೇಟಿಯ ವೇಳೆ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ, ಗುಣಮಟ್ಟ ನಿಯಂತ್ರಣ, ಮಾನವ ಸಂಪನ್ಮೂಲ ನಿರ್ವಹಣೆ, ಮಾರುಕಟ್ಟೆ ತಂತ್ರಗಳು ಹಾಗೂ ಹಣಕಾಸು ನಿರ್ವಹಣೆಯ ಕುರಿತು ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಂಪನಿಯ ವಿವಿಧ ವಿಭಾಗಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು ಕೈಗಾರಿಕಾ ಕಾರ್ಯಾಚರಣೆಯ ನೈಜ ಅನುಭವವನ್ನು ಪಡೆದರು.
ಕಂಪನಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿನ ಅವಕಾಶಗಳು, ಸವಾಲುಗಳು ಹಾಗೂ ವೃತ್ತಿ ಬೆಳವಣಿಗೆಯ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡು, ನಿರ್ವಹಣಾ ಶಿಕ್ಷಣದೊಂದಿಗೆ ಪ್ರಾಯೋಗಿಕ ಅನುಭವದ ಮಹತ್ವವನ್ನು ಅರಿತುಕೊಂಡರು.
ಈ ಕೈಗಾರಿಕಾ ಭೇಟಿಯು ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಕೈಗಾರಿಕಾ ಕ್ಷೇತ್ರದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಯಿತು. ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಮತ್ತು ಕಂಪನಿಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

