

ಹಳ್ನಾಡಿನ ತುಳಸಿ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು. ವಿದ್ಯಾರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು. ತುಳಸಿ ವಿದ್ಯಾ ಮಂದಿರ ಆಂಗ್ಲ ಮಾಧ್ಯತ ಪ್ರೌಢಶಾಲೆಯ ವಿದ್ಯಾರ್ಥಿ ನಾಯಕನಾಗಿ ಸಾಕ್ಷರ್. ಆರ್. ಶೆಟ್ಟಿ ,ಉಪನಾಯಕನಾಗಿ ಪ್ರಥಮ್ ಶೇಟ್ ಆಯ್ಕೆಯಾದರು.
ಶಾಲಾ ಮುಖ್ಯ ಶಿಕ್ಷಕಿ ರೇಷ್ಮ ಪ್ರದೀಪ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಚುನಾವಣಾ ಆಯೋಗದ ಮಾದರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು.
ಶಾಲಾ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮುಖ್ಯ ಶಿಕ್ಷಕರ ಮರ್ಗದರ್ಶನದಲ್ಲಿ ಶಿಕ್ಷಕರು ಚುನಾವಣಾ ಪ್ರಕ್ರಿಯೆ ನಡೆಯಿತು.

