

ಬೆಂಗಳೂರು: ನಗರದಲ್ಲಿ ಸೋಮವಾರ ತಡರಾತ್ರಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಖಾಸಗಿ ಕಂಪನಿ ಉದ್ಯೋಗಿ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿ ಉದ್ಯೋಗಿ ಫ್ರಾನ್ಸಿಸ್ (50) ಮತ್ತು ಸೈಯದ್ ಯೂಸುಫ್ (18) ಮೃತರು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಫ್ರಾನ್ಸಿಸ್ ಬೈಕ್ನಲ್ಲಿ ಎಲೆಕ್ಟ್ರಾನಿಕ್ ಸಿಟಿ ಯಿಂದ ಸಿಲ್ಕ್ ಬೋರ್ಡ್ ಕಡೆಗೆ ಮೇಲ್ಸೇತುವೆ ಮೇಲೆ ಬರುತ್ತಿರುವಾಗ ಎಲೆಕ್ಟ್ರಿಕ್ ವಾಹನ ಸವಾರ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಫ್ರಾನ್ಸಿಸ್ ಕೆಳಗೆ ಬಿದ್ದಿದ್ದು, ಆಗ ಪಕ್ಕದಲ್ಲಿ ಬಂದ ಕ್ರೂಸರ್ಕಾರ್ ಹರಿದು ಸ್ಥಳ ದಲ್ಲಿಯೇ ಮೃತಪಟ್ಟಿ ದ್ದಾರೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ 3 ವಾಹನಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆ ಕಡೆಯಿಂದ ಹುಲಿಮಂಗಲದ ಕಡೆಗೆ ಸೈಯದ್ ಯೂಸುಫ್ ಎಂಬುವರು ಬೈಕ್ನಲ್ಲಿ ಹೋಗುತ್ತಿರುವಾಗ ವಾಟರ್ ಟ್ಯಾಂಕರ್ವಾಹನ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಸವಾರ ಸೈಯದ್ ಯೂಸುಫ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

