

ತೆಲಂಗಾಣ: ರಾಜ್ಕುಮಾರ್ (28) ಎಂಬಾತನೇ 6 ಮಂದಿಯನ್ನು ಹತ್ಯೆ ಮಾಡಿರುವ ವ್ಯಕ್ತಿ. ಪೋಕ್ಸೋ ಪ್ರಕರಣದ 17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿ ರಾಜ್ ಕುಮಾರ್ ಕೊಂದಿದ್ದಾನೆ.
ಪೋಕ್ಸೋ ಪ್ರಕರಣದ ಆರೋಪಿ ರಾಜ್ಕುಮಾರ್ ತನ್ನ ಪತ್ನಿ, ಇಬ್ಬರು ಮಕ್ಕಳು ಹಾಗೂ ಸಂತ್ರಸ್ತೆ ಸೇರಿದಂತೆ 6 ಮಂದಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ಮುಂಜಾನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ನಡೆದಿದೆ.
ರಾಜ್ಕುಮಾರ್ (28) ಎಂಬಾತನೇ 6 ಮಂದಿಯನ್ನು ಹತ್ಯೆ ಮಾಡಿರುವ ವ್ಯಕ್ತಿ. ಪೋಕ್ಸೋ ಪ್ರಕರಣದ 17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿ ರಾಜ್ ಕುಮಾರ್ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ಸಂತ್ರಸ್ತೆಯ ತಾಯಿ ಮತ್ತು ಅಜ್ಜಿಯನ್ನು ಅವರ ಮನೆಯಲ್ಲಿಯೇ ಕೊಂದು, 17 ವರ್ಷದ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಕೊಲೆ ಮಾಡಿ ಬಿಸಾಕಿದ್ದಾನೆ ಎಂದು ಆರೋಪಿಸಲಾಗಿದೆ.
ನಂತರ ಅವನು ತನ್ನ ಮನೆಗೆ ಹಿಂತಿರುಗಿ ತನ್ನ ಪತ್ನಿ ಸರಿತಾ ಮತ್ತು ಅವರ ಇಬ್ಬರು ಮಕ್ಕಳಾದ ಪರೀಕ್ಷಿತ್ (3) ಮತ್ತು ಧೈವಿಕ್ಷಿತ್ (2) ಅವರನ್ನು ಹರಿತವಾದ ಆಯುಧದಿಂದ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಹತ್ಯೆಗಳ ನಂತರ, ಅವನು ತನ್ನ ಪೋಷಕರಿಗೆ ಕರೆ ಮಾಡಿ ತನ್ನ ಕುಟುಂಬವನ್ನು ಕೊಂದಿರುವುದಾಗಿ ತಿಳಿಸಿ ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಾಣೆಯಾಗಿದ್ದಾನೆ ಎಂದು ತಿಳಿದು ಬಂದಿದೆ.


