

ಕೋಟ: ಸರಕಾರಿ ಹುದ್ದೆ ಪಡೆಯಬೇಕಾದರೇ ಓದು ಅಗತ್ಯ. ನಿರಂತರವಾಗಿ ಜ್ಞಾನ ಸಂಪಾದನೆ ಮಾಡಿದಾಗ ಯಾವುದೇ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯವಾಗಲಿದೆ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಭಾನುವಾರ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಮಿತ್ರ ಸಂಗಮ ಬೀಜಾಡಿ-ಗೋಪಾಡಿ, ಕೋಟ ವಿ-ಶೈನ್ ಕೋಚಿಂಗ್ ಸೆಂಟರ್ ಇವರ ಆಶ್ರಯದಲ್ಲಿ ರೋಟರಿ ಕ್ಲಬ್ ಕೋಟೇಶ್ವರ, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಸಹಯೋಗದೊಂದಿಗೆ ಬೀಜಾಡಿ ಮಿತ್ರ ಸೌಧದಲ್ಲಿ ನಡೆದ ಸರಕಾರದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಸ್ಪರ್ಧಾ ದಿಕ್ಸೂಚಿ ಉದ್ಘಾಟಿಸಿ ಮಾತನಾಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸ ಸಾಧಿಸಬೇಕಾದರೇ ಪರೀಕ್ಷೆಯಲ್ಲಿ ಅಭ್ಯರ್ಥಿಯ ಜ್ಞಾನ, ಸಾಮಾನ್ಯ ಅರಿವು, ಭಾಷಾ ಕೌಶಲ್ಯ, ವಿಷಯ ಪರಿಣತಿ ಅಗತ್ಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಗೌರವಾಧ್ಯಕ್ಷ ಬಿ.ವಾದಿರಾಜ್ ಹೆಬ್ಬಾರ್ ವಹಿಸಿದ್ದರು. ರೋಟರಿ ಕ್ಲಬ್ ಕೋಟೇಶ್ವರದ ಅಧ್ಯಕ್ಷೆ ಅಕ್ಷತಾ ಗಿರೀಶ್, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಉಪಾಧ್ಯಕ್ಷ ರಾಜೀವ ದೇವಾಡಿಗ, ಸಮಾಜ ಸೇವಕ ಡೇವಿಡ್ ಸಿಕ್ವೇರಾ ಶುಭ ಹಾರೈಸಿದರು. ಬೀಜಾಡಿ-ಗೋಪಾಡಿ ಮಿತ್ರ ಸಂಗಮದ ಅಧ್ಯಕ್ಷ ಶಂಕರನಾರಾಯಣ ಬಾಯರಿ, ಮಹಾರಾಷ್ಟ ಸರಕಾರದ ನಿವೃತ್ತ ನೌಕರ ಎಲ್.ವಿ.ನಾಯ್ಕ್ ಸಮಾಜ ಸೇವಕ ಡೇವಿಡ್ ಸಿಕ್ವೇರಾ ಮತ್ತು ಇತರರು ಉಪಸ್ಥಿತರಿದ್ದರು.ಕಾರ್ಯಾಗಾರದಲ್ಲಿ ಭಾಗವಹಿಸಿದ ಕೀರ್ತನಾ, ವಿಶಾಲಾಕ್ಷಿ ಅನಿಸಿಕೆ ವ್ಯಕ್ತಪಡಿಸಿದರು.


