

ವಿಜಯಪುರ: ವಿಜಯಪುರ ನಗರದ ಹೊರ ವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಹೆಣಗಳ ರಾಶಿ ತೇಲಿ ಬಂದಿದ್ದು, ಸ್ಥಳೀಯರಲ್ಲಿ ಆತಂ ಮೂಡಿಸಿದೆ. ಭೂತನಾಳ ಕೆರೆಯಲ್ಲಿ ಒಟ್ಟು 6 ಶವ ಪತ್ತೆಯಾಗಿದ್ದು, ಇದರಲ್ಲಿ ತಾಯಿ ಸೇರಿ ಮಕ್ಕಳು ಶವಗಳು ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಬ್ಬರು ಗಂಡು ಮಕ್ಕಳು,ಮೂವರು ಬಾಲಕಿಯರು ಸೇರಿದಂತೆ ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮೊದಲು ಕೆರೆ ನೋಡಲು ಬಂದ ಪ್ರವಾಸಿಗರು ಇರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಆದರ್ಶ ನಗರ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದ್ದು, ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಮೃತ ಆರು ಮಂದಿಯಲ್ಲಿ ತಾಯಿ ಸೇರಿದಂತೆ ಐವರು ಮಕ್ಕಳು ಎಂದು ಪೊಲೀಸರು ಗುರುತಿಸಿದ್ದಾರೆ.
ಆಗಸ್ಟ್ 24ರಿ೦ದ ಕುಟು೦ಬ ನಾಪತ್ತೆ
ಮೃತರನ್ನು ಶೋಭಾ ಜಾಲಗೇರಿ (45) ಹಾಗೂ ಅವರ ಮಕ್ಕಳಾದ ವಿದ್ಯಾ (16, ಸುವರ್ಣ (14), ಗೌಡೇಶ್ (10),
ವಿಕಾಸ (5) ಮತ್ತು ಸಾನಿಕಾ (7) ಎಂದುಗುರುತಿಸಲಾಗಿದೆ. ಈ ಕುಟು೦ಬ ಆಗಸ್ಟ್ 24ರಿ೦ದ ಕಾಣೆಯಾಗಿತ್ತು
ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಶೋಭಾ ಹಾಗೂ ಅವರ ಪತಿ ಮಲಕಾರಿ ಭೀಮರಾಯ ಜಾಲಗೇರಿ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ನಡೆದಿತ್ತು ಎನ್ನಲಾಗಿದೆ. ಜಗಳದ ಬಳಿಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಶೋಭಾ ಮಕ್ಕಳೊ೦ದಿಗೆ ಹೊರಟು ಬ೦ದಿದ್ದರು ಎ೦ಬಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ, ಆಗಸ್ಟ್ 24ರ ಸೋಮವಾರ ಆರು ಮಂದಿ ನಾಪತ್ತೆಯಾಗಿರುವ ಬಗ್ಗೆ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

