

ಕಠ್ಮಂಡು: ಉತ್ತರ ನೇಪಾಳದಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಗಡಿ ಜಿಲ್ಲೆಯಲ್ಲಿರುವ ಹಳ್ಳಿಗಳ ಹಲವು ಮನೆಗಳು ಕೊಚ್ಚಿ ಹೋಗಿವೆ. ಟಿಬೆಟ್ನಲ್ಲಿ ಹಿಮನದಿ ಸ್ಫೋಟ ಸಂಭವಿಸಿದ ಕಾರಣ ಅಪಾರ ಪ್ರಮಾಣದ ನೀರು ಹರಿದುಬಂದು ಪ್ರವಾಹ ಸ್ಥಿತಿ ಎದುರಾಗಿದೆ ಎಂದು ಅಂದಾಜಿಸಲಾಗಿದೆ.
ಪ್ರವಾಹದಲ್ಲಿ ಹಲವರು ಮೃತಪಟ್ಟಿರುವ ಶಂಕೆಯಿದೆ. ಜತೆಗೆ ಕನಿಷ್ಠ 12 ಜಲವಿದ್ಯುತ್ ಯೋಜನೆಗಳಿಗೆ ಹಾನಿಯಾಗಿದೆ.
ರಸುವಾದಲ್ಲಿ ಉಂಟಾದ ಪ್ರವಾಹದ ಕಾರಣದಿಂದಾಗಿ ಒಟ್ಟು 384 ಪ್ರಯಾಣಿಕರು, ಇವರಲ್ಲಿ 291 ವಿದೇಶಿಯರು ಮತ್ತು 93 ನೇಪಾಳಿ ಪ್ರಜೆಗಳು ನಾಪತ್ತೆಯಾಗಿದ್ದಾರೆ.ಈ ಪ್ರಯಾಣಿಕರಲ್ಲಿ ಕನಿಷ್ಠ 115 ಭಾರತೀಯ ಪ್ರವಾಸಿಗರು, 37 ಅನಿವಾಸಿ ಭಾರತೀಯರು ಹಾಗೂ ಅಮೆರಿಕ, ಮಲೇಷ್ಯಾ, ಯುಕೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನೆದರ್ಲ್ಯಾಂಡ್ಸ್ನ ಪ್ರವಾಸಿಗರು ಸೇರಿದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿಯ (NTB) ಹೇಳಿದೆ.ಸಹಾಯಕ್ಕಾಗಿ ನೇಪಾಳ ಪ್ರವಾಸೋದ್ಯಮ ಮಂಡಳಿಯು ಉಚಿತ ತುರ್ತು ಸಹಾಯವಾಣಿ ತೆರೆದಿದ್ದು, 1234, ಹಾಟ್ಲೈನ್ ಸಂಖ್ಯೆ 1144 ಅಥವಾ ಪ್ರವಾಸಿ ಪೊಲೀಸ್ ಸಹಾಯವಾಣಿ ಸಂಖ್ಯೆ 9851289445 ಅನ್ನು ಬಿಡುಗಡೆ ಮಾಡಿದೆ.





