

ಹಿರಿಯ ದಲಿತ ನಾಯಕ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ವೇದಿಕೆಯನ್ನು “ಶುದ್ಧೀಕರಣ” ಮಾಡಿದ ಘಟನೆಯನ್ನು ಖಂಡಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾಳೆ ಪ್ರತಿಭಟನೆ ಮತ್ತು ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಸ್ಥಳ: ಕುಂದಾಪುರ ಶಾಸ್ತ್ರಿ ಸರ್ಕಲ್
ತಾರೀಖು: 27 ಅಗಸ್ಟ್. ಗುರುವಾರ
ಸಮಯ: ಮಧ್ಯಾಹ್ನ 3:30 ಗಂಟೆಗೆ
ಮೆರವಣಿಗೆ: ಶಾಸ್ತ್ರಿ ಸರ್ಕಲ್ನಿಂದ ಕುಂದಾಪುರ ಉಪವಿಭಾಗಾಧಿಕಾರಿಯವರ ಕಚೇರಿಯವರೆಗೆ
ಜಾತಿ ತಾರತಮ್ಯ, ಅಸ್ಪೃಶ್ಯತೆ ಹಾಗೂ ಮನುಷ್ಯನ ಘನತೆಯನ್ನು ಅವಮಾನಿಸುವ ಮನೋಭಾವದ ವಿರುದ್ಧ ನಡೆಯುವ ಈ ಪ್ರತಿಭಟನೆಯಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ನ ಎಲ್ಲಾ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.
ಜೈ ಭೀಮ್ ಜೈ ಸಂವಿಧಾನ ಜೈ ಕಾಂಗ್ರೆಸ್ – ಕುಂದಾಪುರ ಬ್ಲಾಕ್ ಕಾಂಗ್ರೆಸ್

