
ಆಗಸ್ಟ್ 23 ರಂದು ಶಿವಮೊಗ್ಗದಲ್ಲಿ ನಡೆದಂತಹ ಓಪನ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2026 ಸ್ಪರ್ಧೆಯಲ್ಲಿ ಸ್ಪಧಿ೯ಸಿದ ಗಂಗೊಳ್ಳಿಯ ಸ್ಟೆಲ್ಲಾಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳಾದ ಮಹಮ್ಮದ್ ಅಫ್ಸಾನ್ ಕುಮಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು, ಮಹಮ್ಮದ್ ಮುಫಿಝ್ ಕುಮಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮತ್ತು 8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಮಾಝ್ ಕುಮಟೆ ಮತ್ತು ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಯನ್ನು ಮಾಡಿ ಶಾಲೆಯ ಗರಿಮೆಯನ್ನು ಉತ್ತುಂಗಕ್ಕೆ ಏರಿಸಿರುತ್ತಾರೆ.
ಇವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಧರ್ಮಭಗಿನಿ ವಿಜಯಾ ಕ್ರಾಸ್ತಾ , ಶಿಕ್ಷಕ -ಶಿಕ್ಷಕೇತರ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿ ಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.


