

ತ್ರಿಶೂರ್; ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸ೦ಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎ೦ಟು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ ರಾತ್ರಿ ಸುಮಾರು 11.40ರ ವೇಳೆಗೆ ಅಪಘಾತ ಸ೦ಭವಿಸಿದೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ತ್ರಿಶೂರ್ ಜಿಲ್ಲೆಯ ಕೈಪಮ೦ಗಲ೦ ಸಮೀಪದ ಪನಂಬಿಕುನ್ನು ಪ್ರದೇಶದಲ್ಲಿ ಈ ದುರ್ಫಟನೆ ನಡೆದಿದೆ.
ಹೆದ್ದಾರಿಯಲ್ಲಿ ವಿ೦ತಿದ್ದ ಲಾರಿಗೆ ಕಾರು ಅತಿವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎ೦ಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎ೦ದು ಪೊಲೀಸರು ತಿಳಿಸಿದ್ದಾರೆ. ಮ್ರತರೆಲ್ಲರೂ ತಮಿಳುನಾಡು ರಾಜ್ಯದ ವಿದ್ಯಾರ್ಥಿಗಳೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಅಪಘಾತದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

