

ಬಸ್ರೂರು ಸರಕಾರಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಪಿಯುಸ್ ಡಿಸೊಜ ಇವರಿಗೆ ಕರ್ನಾಟಕ ಸರಕಾರ ಶಿಕ್ಷಕರ ಕಲ್ಯಾಣ ನಿಧಿಯಿಂದ ಕೊಡಮಾಡುವ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಡುಪಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ದಿನ ಪ್ರಧಾನ ಮಾಡಲಾಯಿತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 16 ಶಿಕ್ಷಕರು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.





