


ಸೆಪ್ಟೆಂಬರ್ ೧೩ ಭಾನುವಾರದಂದು ಕೋಟ ಸಂತ ಜೋಸೆಫರ ಇಗರ್ಜಿಯಲ್ಲಿ ಆರೋಗ್ಯ ಜಾಗ್ರತಿ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು. ಕೋಟ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಮಾಧವ್ ಪೈ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಆರೋಗ್ಯ ಕಾಪಾಡುವ ಬಗ್ಗೆ ಅಗತ್ಯದ ಮಾಹಿತಿಗಳನ್ನು ನೀಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ವಿವಿಧ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಬಹು ಸಂಖ್ಯೆಯಲಿ ಜನರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.
ಪ್ರಾರಂಭದಲ್ಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಸ್ಟ್ಯಾನಿ ತಾವ್ರೊ ಅವರು ಎಲ್ಲರನ್ನು ಸ್ವಾಗತಿಸಿದರು. ಅನಿತಾ ಫೆರ್ನಾಂಡಿಸ್ ಅವರು ಡಾ. ಮಾಧವ್ ಪೈ ಅವರ ಪ್ರರಿಚಯವನ್ನು ಮಾಡಿ ಕೊಟ್ಟರು. ಚರ್ಚಿನ ಪಾಲನಾ ಮಂಡಳಿಯ ಉಪಾದ್ಯಕ್ಶರಾದ ಹೆರಾಲ್ಡ್ ಫೆರ್ನಾಂಡಿಸ್ ಹಾಗು ಕಾರ್ಯದರ್ಶಿ ನೋರಾ ಡಿಸೋಜಾ ಅವರು ಉಪಸ್ಥಿತರಿದ್ದರು. ವಿಲ್ಟನ್ ಓಲಿವೆರಾ ಅವರು ಧನ್ಯವಾದ ಸಮರ್ಪಣೆ ಮಾಡಿದರು. ಪ್ಲಾವಿಯಾ ಡಾಯಸ್ ಅವರು ಕಾರ್ಯಕ್ರಮದ ನಿರೂಪಣೆ ಮಾಡಿದರು.





