

ಬೆಳಗಾವಿ: ಬೈಕ್ ಹಾಗೂ ಸಾರಿಗೆ ಬಸ್ ನಡುವೆ 2026ರ ಸೆಪ್ಟೆಂಬರ್ 14ರ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರನ್ನು ವಿನಯ್ ಜೋಗೆನ್ನವರ (22 ವರ್ಷ), ಆಕಾಶ ಜಾಧವ (20 ವರ್ಷ) ಮತ್ತು ರವಿ ಕುರಬರ (22 ವರ್ಷ) ಎಂದು ಗುರುತಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ದ್ವಿಚಕ್ರ ವಾಹನ ಬಸ್ ಗೆ ಡಿಕ್ಕಿ ಹೊಡೆದು ಕೆಳಗೆ ನುಗ್ಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ದ್ವಿಚಕ್ರ ವಾಹನ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ಸ್ಥಳದಲ್ಲೇ

