

ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ(02-10-2026) ಗಾಂಧಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿರುವ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಐ ವಿ ಯವರು ಪ್ರಾಸ್ತಾವಿಕ ಮಾತುಗಳಾಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾವಿತ್ರಿ ಕೆ. ಇವರು ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಹೂವನ್ನು ಸಮರ್ಪಿಸಿ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ತತ್ವ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಬೇಕು ಎಂದರು. ಶಾಲಾ ಗೈಡ್ಸ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಷ್ಟ್ರಪತಿ ಪದಕಗಳನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಶಾಲಾ ಗೈಡ್ಸ್ ಶಿಕ್ಷಕಿ ಸೆಲಿನ್ ಬಾರೆಟ್ಟೊ, ಇವರ ಮಾರ್ಗದರ್ಶನದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು .ಶಿಕ್ಷಕರಾದ ಅಶೋಕ್ ದೇವಾಡಿಗ ಇವರು ಸ್ವಾಗತಿಸಿದರು. ಶಾಲಾ ಹಿರಿಯ ಶಿಕ್ಷಕರಾದ ಮೈಕಲ್ ಪುಟಾರ್ಡೊ ವಂದಿಸಿದರು. ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











