

ಮಂಗಳೂರು, ಆ. 5: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಆಶ್ರಯದಲ್ಲಿ ಹರೇಕಳದ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ನಡೆದ 14–17 ವಯೋಮಿತಿಯ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯ 55 ಕೆ.ಜಿ. ವಿಭಾಗದಲ್ಲಿ ಬೋಳಾರದ ಸೈಂಟ್ ಆನ್ಸ್ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ತನ್ಮಯ ಸುವರ್ಣ ಅವರು ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಅವರ ಈ ಗಮನಾರ್ಹ ಸಾಧನೆಗೆ ವೀರಭಾರತಿ ವ್ಯಾಯಾಮ ಶಾಲೆಯ ತರಬೇತುದಾರ ಆನಂದ ಅಮೀನ್ ಅವರ ಮಾರ್ಗದರ್ಶನ ಹಾಗೂ ತರಬೇತಿ ಮಹತ್ವದ ಪಾತ್ರ ವಹಿಸಿದೆ. ವಿಜೇತರಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು. ಅವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.



