

ಕುಂದಾಪುರ: ಅಕ್ಟೋಬರ್ 13ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇನ್ಪೋಫೋಸಿಸ್ ಕಂಪೆನಿ ಮತ್ತು ಮಣಿಪಾಲದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇವರ ಸಹಯೋಗದಲ್ಲಿ ಕೌಶಲ್ಯ ತರಬೇತಿ ನೀಡುವ ಮೊಬೈಲ್ ಕಲಿಯುವಿಕೆಯ ಸ್ಪ್ರಿಂಗ್ ಬೋರ್ಡ್ ಬಸ್ ಆಗಮಿಸಿದ್ದು ಕಾಲೇಜಿನ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ನೀಡುತ್ತಿದೆ. ಈ ಬಸ್ ಕಾಲೇಜಿನಲ್ಲಿ ಮೂರು ದಿನಗಳ ಕಾಲ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ನೀಡಲಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತಿದೆ. ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಮಾತನಾಡಿ ವಿದ್ಯಾರ್ಥಿಗಳು ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಇದು ಒಳ್ಳೆಯ ವೇದಿಕೆಯನ್ನು ನಿರ್ಮಿಸಿದ್ದು ಅದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ ಎಂದು ಹೇಳಿದರು.

