

ಕುಂದಾಪುರ ; ಇತ್ತೀಚೆಗೆ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳ ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮೂಡಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಹರ್ಷಿಣಿ ಬೆಳ್ಳಿಯ ಪದಕ ಮತ್ತು ಪ್ರಣೀತ್ ರೈ ಕಂಚಿನ ಪದಕ ಗಳಿಸಿರುತ್ತಾರೆ. ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ಇವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.



