

ಕುಂದಾಪುರ; ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ ಆಯುಕ್ತಕರ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ 2026- 27ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಸ್ರೂರು ಇಲ್ಲಿ ನಡೆಯಿತು ಈ ವಿಚಾರಗೋಷ್ಠಿಯಲ್ಲಿ ತುಳಸಿ ವಿದ್ಯಾ ಮಂದಿರ ಹಳ್ನಾಡು ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಸಾಕ್ಷರ ಆರ್ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ವಿಚಾರಗೋಷ್ಠಿಯಲ್ಲಿ “ಭಾರತದ ಇಂಧನ ಸಂಪನ್ಮೂಲ ಸಮೂಹ : ಭವಿಷ್ಯದ ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ವಿದ್ಯಾರ್ಥಿ ಪರಿಣಾಮಕಾರಿಯಾಗಿ ವಿಚಾರ ಮಂಡಿಸಿ ದ್ವಿತೀಯ ಸ್ಥಾನವನ್ನು ಗಳಿಸಿದರು.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಲು ವಿಜ್ಞಾನದ ಕುರಿತು ಆಸಕ್ತಿ ಮತ್ತು ಸಂಶೋಧನಾ ಮನೋಭಾವನೆಯನ್ನು ಬೆಳೆಸುವ ಉದ್ದೇಶದಿಂದ ಈ ವಿಚಾರಗೋಷ್ಠಿಯನ್ನು ಆಯೋಜಿಸಲಾಯಿತು.
ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿನಂದನೆಯನ್ನು ಸಲ್ಲಿಸಿದರು.

