

ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ತುಳಸಿ ವಿದ್ಯಾ ಮಂದಿರದ 9ನೇ ತರಗತಿಯ ವಿದ್ಯಾರ್ಥಿ ಸಾಕ್ಷರ. ಅರ್. ಶೆಟ್ಟಿ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ‘ಅಡಿಕೆ ಹರಿವು’ ಎಂಬ ವಿಷಯದ ಮಾದರಿಯನ್ನು ಪ್ರದರ್ಶಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಅಡಿಕೆ ಕೃಷಿಯ ಮಹತ್ವ, ಅದರ ಸಂಸ್ಕರಣಾ ವಿಧಾನ ಹಾಗೂ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯನ್ನು ಈ ಮಾದರಿಯ ಮೂಲಕ ವಿದ್ಯಾರ್ಥಿ ಪ್ರಸ್ತುತಪಡಿಸಿದ್ದಾನೆ. ಇದು ಕೃಷಿಕರ ಶ್ರಮವನ್ನು ಕಡಿಮೆ ಮಾಡುವುದರ ಜೊತೆಗೆ ಅಡಿಕೆ ಉದ್ಯಮದ ಮಹತ್ವವನ್ನು ತಿಳಿಸುತ್ತದೆ. ಇವರ ಈ ಸಾಧನೆ ಶಾಲೆಗೆ ಹೆಮ್ಮೆ ತಂದಿದೆ.
ವಿದ್ಯಾರ್ಥಿ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಸಿ ಏ ಕೃಷ್ಣರಾಯ ಶಾನುಭಾಗ್, ಮುಖ್ಯೋಪಾಧ್ಯಾಯರಾದ ಶ್ರೀಮತಿ ರೇಷ್ಮಾ ಪ್ರದೀಪ್ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿ ಮುಂದಿನ ಸಾಧನೆಗೆ ಶುಭ ಹಾರೈಸಿದರು.

