


ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್, ಮಂಗಳೂರು ಇದರ ವತಿಯಿಂದ ಕ್ರೈಸ್ತ ಸಮುದಾಯದ ಸದಸ್ಯರಿಗಾಗಿ ಡಿಸೆಂಬರ್ 6, 2026ರ ಭಾನುವಾರದಂದು ಕಂಕನಾಡಿಯ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಈ ಪಂದ್ಯಾವಳಿಯಲ್ಲಿ ಬಾಲಕರು, ಪುರುಷರು, ಬಾಲಕಿಯರು ಹಾಗೂ ಮಹಿಳೆಯರಿಗಾಗಿ ವಿವಿಧ ವಯೋಮಾನದ ಸಿಂಗಲ್ಸ್ ಮತ್ತು ಡಬಲ್ಸ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ನೀಡಲಾಗುವುದು.
ಪಂದ್ಯಾವಳಿಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಲು ನವೆಂಬರ್ 30, 2026 ಕೊನೆಯ ದಿನವಾಗಿದೆ. ಆಸಕ್ತರು ಪೋಸ್ಟರ್ನಲ್ಲಿರುವ QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಅರುಣ್ ಬ್ಯಾಪ್ಟಿಸ್ಟ್ (9844619487) ಅಥವಾ ಲಾರೆನ್ಸ್ ಕ್ರಾಸ್ತಾ (9739926101) ಅವರನ್ನು ಸಂಪರ್ಕಿಸಬಹುದು.

