ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಾಷ್ಟ್ರೀಯ ಮತದಾರರ ದಿನಾಚರಣೆ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ರಾಷ್ಟ್ರೀಯ ಮತದಾರರ ದಿನಾಚರಣೆ


ಮತದಾನವು ಪ್ರಜಾಪ್ರಭುತ್ವದ ಕೇವಲ ರಾಜಕೀಯ ಹಕ್ಕಾಗಿರದೆ ಅದೊಂದು ಪವಿತ್ರ ಕರ್ತವ್ಯವೂ ಆಗಿದೆ. ಮತದಾನ ನಮ್ಮ ಅಮೂಲ್ಯ ಹಕ್ಕು, ಯಾವುದೇ ಆಮಿಷಗಳಿಗೆ ಬಲಿಯಾಗದೇ, ಸ್ವಾಭಿಮಾನವನ್ನು ಕಳೆದುಕೊಳ್ಳದೇ ತಮ್ಮ ಕೆಲಸದ ನಡುವೆ ಬಿಡುವು ಮಾಡಿಕೊಂಡು ತಪ್ಪದೇ ಮತದಾನ ಮಾಡಿ ಹಾಗೂ ತಮ್ಮ ಹಕ್ಕು ಚಲಾಯಿಸಿ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ವತಿಯಿಂದ ಸಂಘದ ರಂಗಮಂದಿರದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿ ಸಂಘದ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್‍ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ, ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಮಹಿಳಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸಂಘದ ಸದಸ್ಯರಾದ ಲಲಿತಾ ಆಚಾರ್ಯ, ಲೀಲಾ ಪೂಜಾರಿ, ಪುಷ್ಪ ಕುಲಾಲ್, ಆರತಿ ಕುಮಾರಿ ಮೊದಲಾದವರು ಉಪಸ್ಥಿತಿತರಿದ್ದರು.