ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಉದ್ಯೋಗ ಮಾಹಿತಿ ಕಾರ್ಯಾಗಾರ

ವರದಿ:ವಾಲ್ಟರ್ ಮೊಂತೇರೊ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಉದ್ಯೋಗ ಮಾಹಿತಿ ಕಾರ್ಯಾಗಾರ


ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ಉದ್ಯೋಗ ಮಾಹಿತಿ ಕಾರ್ಯಾಗಾರ ಆದಿತ್ಯವಾರ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೆದಿಂಜೆ ಅರ್ಜುನ್ ಭಾಗವಹಿಸಿ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷ ರಾಜೇಶ್ ಕೋಟ್ಯಾನ್ ವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಸಂದೀಪ್ ವಿ. ಪೂಜಾರಿ, ವಿರೇಂದ್ರ ಆರ್.ಕೆ., ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ನಿಕಟ ಪೂರ್ವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ, ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ, ಸದಸ್ಯರಾದ ಅಬ್ಬನಡ್ಕ ಸತೀಶ್ ಪೂಜಾರಿ, ಮಂಜುನಾಥ ಆಚಾರ್ಯ, ಸುನೀತಾ ಮರಿಯಾನ್ ಪಿಂಟೋ, ಸ್ಮಿತಾ ಸುರೇಶ್ ಪೂಜಾರಿ ಮೊದಲಾದವರು ಉಪಸ್ಥಿತಿತರಿದ್ದರು.