ವರದಿ:ವಾಲ್ಟರ್ ಮೊಂತೇರೊ
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಯುಗಾದಿ ಸಂಭ್ರಮ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ವತಿಯಿಂದ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಂಘದ ರಂಗಮಂದಿರದಲ್ಲಿ ನಡೆದ ಯುಗಾದಿ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತಾನಾಡಿ ಯುಗಾದಿ ಹಬ್ಬದಂದು ಬೇವು-ಬೆಲ್ಲ ತಿನ್ನುವ ಆಚರಣೆಯು ಒಂದು ವಿಶಿಷ್ಟ ಪರಿಕಲ್ಪನೆಯೇ ಸರಿ. ಸಿಹಿ-ಕಹಿ, ಸುಖ-ಕಷ್ಟ, ನಲಿವು-ನೋವು ಎಂಬ ಮಾತಿನಂತೆ ಜೇವನದಲ್ಲಿ ಇವೆರಡರ ಸಮಾನ ಇರುವಿಕೆ ಅಗತ್ಯವಾಗಿದೆ. ಆಗ ಮಾತ್ರ ಜೀವನ ಸುಗಮವಾಗಿ ಸಾಗಲು ಸಾಧ್ಯ. ಆದರೆ ಕಷ್ಟಕ್ಕಿಂತ ಸುಖವೇ ಬೇಕು ಎಂದು ಬಯಸುವವರು ಹೆಚ್ಚಿರುವ ಪರಿಸ್ಥಿತಿಯಲ್ಲಿ ಕಷ್ಟವನ್ನು, ಕಹಿಯನ್ನು, ನೋವನ್ನು ಬಯಸುವವರೇ ಇಲ್ಲವೆನ್ನವಂತಾಗಿದೆ. ಆದರೆ ಜೀವನ ಎನ್ನುವುದು ಕಷ್ಟ-ಸುಖಗಳ ಸಂಯೋಜನೆಯಾಗಿದೆ. ಹಾಗಾಗಿ ಇವೆರಡು ಒಂದನ್ನೊಂದು ಬಿಟ್ಟಿರಲಾರವು ಎಂದು ಹೇಳಿದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷ ರಾಜೇಶ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ನಿಕಟ ಪೂರ್ವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ, ಕೋಶಾಧಿಕಾರಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಪುಷ್ಪ ಕುಲಾಲ್, ಸುನೀತಾ ಪಿಂಟೋ ಮೊದಲಾದವರು ಉಪಸ್ಥಿತಿತರಿದ್ದರು.