ಅಬ್ಬನಡ್ಕ : ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ:ಪೌರ ಕಾರ್ಮಿಕರಾದ ವಸಂತ್ ಬೆಳ್ಮಣ್ಣುರವರಿಗೆ ಸನ್ಮಾನ

ವರದಿ:ವಾಲ್ಟರ್ ಮೊಂತೇರೊ

ಅಬ್ಬನಡ್ಕ : ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ:ಪೌರ ಕಾರ್ಮಿಕರಾದ ವಸಂತ್ ಬೆಳ್ಮಣ್ಣುರವರಿಗೆ ಸನ್ಮಾನ


ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನಹರೂ ಯುವ ಕೇಂದ್ರ ಉಡುಪಿ ಮತ್ತು ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಬೆಳ್ಮಣ್ಣು ಗ್ರಾಮ ಪಂಚಾಯತ್‍ನಲ್ಲಿ ಕಳೆದ 20ಕ್ಕೂ ಅಧಿಕ ವರ್ಷಗಳಿಂದ ಪೌರ ಕಾರ್ಮಿಕರಾಗಿ ಬೆಳ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್‍ಸ್ಟ್ಯಾಂಡ್, ತರಕಾರಿ ಮಾರುಕಟ್ಟೆ, sಸಾರ್ವಜನಿಕ ಸ್ಥಳ ಮುಂತಾದ ಹಲವಾರು ಕಡೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಾ ತನ್ನ ಕೆಲಸಕಾರ್ಯಗಳನ್ನು ನಿಷ್ಠೆಯಿಂದ ಮಾಡುತ್ತಿರುವ ವಸಂತ್ ಬೆಳ್ಮಣ್ಣು ಇವರಿಗೆ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಸನ್ಮಾನ ನಡೆಸಲಾಯಿತು.
ನಿಷ್ಠೆಯಿಂದ ಕೆಲಸ ಮಾಡಿದ ಪೌರ ಕಾರ್ಮಿಕರಿಗೆ ಅವರ ಕೆಲಸ ಕಾರ್ಯವನ್ನು ಗುರುತಿಸಿ ಸಮಾಜದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಶ್ರಮಿಸುವ ಪೌರ ಕಾರ್ಮಿಕರನ್ನು ಸನ್ಮಾನಿಸುತ್ತಿರುವುದು ವಿಶ್ವ ಕಾರ್ಮಿಕರ ದಿನಾಚರಣೆಯ ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ಸ್ವಸ್ಥ ಸಮಾಜದ ಶುಚಿತ್ವ ಕಾಪಾಡುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು ಎಂದು ಅಬ್ಬನಡ್ಕ ಸಾರ್ವಜನಿಕ ಶ್ರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಸಂತ್ ಬೆಳ್ಮಣ್ಣುರವರನ್ನು ಸನ್ಮಾನಿಸಿ ಮಾತನಾಡಿದರು.
ಪೌರ ಕಾರ್ಮಿಕರ ಶ್ರಮ ಸಮಾಜದಲ್ಲಿ ಸಾರ್ಥಕತೆ ಕಾಣಲು ಸಾರ್ವಜನಿಕರು ಕೂಡ ಸ್ವಚ್ಛತೆಯ ಪಾಲನೆ ಮಾಡಬೇಕು. ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟುವ ವಾತವಾರಣ ನಿರ್ಮಾಣವಾಗಲು ಸಾಧ್ಯ. ಪೌರ ಕಾರ್ಮಿಕರು ಸಮಾಜದ ಮುಖ್ಯವಾಹಿನಿಯೊಂದಿಗೆ ಸಮನಾಗಿ ಸಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಹಲವಾರು ಯೋಜನೆ, ಸೌಲಭ್ಯಗಳನ್ನು ಸದುಪಯೋಗ ಪಡೆದು ಉತ್ತಮ ಜೀವನ ರೂಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಅಧ್ಯಕ್ಷ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮಾತನಾಡಿದರು.
ಈ ಸಂಧರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ನಂದಳಿಕೆ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಸ್ಥಳೀಯರಾದ ಸಂತೋಷ್ ಬೆಳ್ಮಣ್ಣು, ರಿದ್ಧಿ ಶೆಟ್ಟಿ, ಆಧ್ಯಾ ಶೆಟ್ಟಿ, ವಿಧಿನ್ ಶೆಟ್ಟಿ, ನೀಯಾ ಶೆಟ್ಟಿ ಮತ್ತಿತರರು ಉಪಸ್ಥಿತಿತರಿದ್ದರು.